Join The Telegram | Join The WhatsApp |
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬದುಕು ದುಸ್ತರವಾಗಿದೆ. ಡಾ. ಮನಮೋಹನ್ ಸಿಂಗ್ ಸರ್ಕಾರದ ಅವಧಿಗೆ ಹೋಲಿಸಿದರೆ ಎಲ್ಪಿಜಿ ಸಿಲಿಂಡರ್ ದರ ದುಪ್ಪಟ್ಟಿಗಿಂತ ಜಾಸ್ತಿಯಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ದೂರಿದರು.
ಕೆಪಿಸಿಸಿ ವತಿಯಿಂದ ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿರುವ ನಾ ನಾಯಕಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ಇಲ್ಲಿನ ಸರ್ಕಾರ ಯಾವ ಕೆಲಸ ಮಾಡಿದರೂ ಶೇ 40ರಷ್ಟು ಲಂಚ ಪಡೆಯುತ್ತಿದೆ. ಜನರ ತೆರಿಗೆಯ ಹಣ ಲಂಚದ ರೂಪದಲ್ಲಿ ಸರ್ಕಾರದಲ್ಲಿರುವ ಕೆಲವರ ಜೇಬು ಸೇರುತ್ತಿದೆ ಎಂದರು
ಬೆಂಗಳೂರು :
ನಗರದ ಅರಮನೆ ಮೈದಾನದ ಮುಖ್ಯದ್ವಾರದ ಬಳಿ ಇಂದು ಕಾಂಗ್ರೆಸ್ ನಿಂದ ನಾ ನಾಯಕಿ ಸಮಾವೇಶಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ – ವಾದ್ರಾ ಭಾಗವಹಿಸಿ ಭರ್ಜರಿ ಭಾಷಣ ಮಾಡಿದ್ದಾರೆ.
ದೀಪ ಬೆಳಗಿಸುವ ಮೂಲಕ ಕಾಂಗ್ರೆಸ್ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ . ಬಳಿಕ ಕನ್ನಡದಲ್ಲಿ ಮಾತನಾಡಿ , ಅಕ್ಕ , ತಂಗಿ ಏಳಿ ಎದ್ದೇಳಿ ಮಲಗಿದ್ದು ಸಾಕು ಎಂದು ಹೇಳಿದರು. ದೇಶಕ್ಕೆ ಇಂದಿರಾ ಗಾಂಧಿ ಕೊಡುಗೆ ಅಪಾರ. ಬಡವರು , ಮಹಿಳೆಯರು , ರೈತರಿಗೆ ಸಾಕಷ್ಟು ಯೋಜನೆ ನೀಡಿದ್ದಾರೆ . ಕಾಂಗ್ರೆಸ್ ಅವಧಿಯಲ್ಲಿ ಸಾಕಷ್ಟು ಜನಪರ ಕೆಲಸ ಮಾಡಲಾಗಿತ್ತು . ಕೇಂದ್ರದಲ್ಲಿ ಈಗ ಬಿಜೆಪಿ ಸರ್ಕಾರ ಇದೆ . ಬೆಲೆ ಏರಿಕೆಯಿಂದ ಇಂದು ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.
ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕರ್ನಾಟಕ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ , ಪಿಎಸ್ ಐ ನೇಮಕಾತಿ ಹಗರಣ ಸೇರಿ ಹಲವು ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ಬಿಜೆಪಿ ಸರ್ಕಾರ ಮುಳುಗಿದೆ ಎಂದು ವಾಗ್ದಾಳಿ ನಡೆಸಿದರು. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ . ಕೋವಿಡ್ ವೇಳೆ ಜನರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ . ಉದ್ಯೋಗ ನೀಡುವಲ್ಲಿ ವಿಫಲ , ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ . ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ . ರೈತರು , ಬಡವರ ಸಮಸ್ಯೆಗಳಿಗೆ ಕೇಂದ್ರ , ರಾಜ್ಯ ಸರ್ಕಾರ ಸ್ಪಂದಿಸಿಲ್ಲ . ಅನಗತ್ಯ ವಿವಾದಗಳನ್ನು ಸೃಷ್ಟಿಸಿ ಜನರನ್ನು ದಾರಿ ತಪ್ಪಿಸಲಾಗುತ್ತದೆ . ಶ್ರೀಮಂತರ ಪರ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.
Join The Telegram | Join The WhatsApp |