ಬೆಳಗಾವಿ : ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ಆಸೀಫ್ ಸೇಠ್, ಚನ್ನರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮತ್ತಿತರರು ಹಾಜರಿದ್ದರು.