ದೆಹಲಿ : ಅಮೇಠಿಯಿಂದ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಹಾಗೂ ರಾಯ್‌ಬರೇಲಿ ಕೇತ್ರದಿಂದ ಪ್ರಿಯಾಂಕಾ ಅಥವಾ ರಾಹುಲ್‌ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.

ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಮೂರು ದಿನ ಬಾಕಿ ಇದೆ. ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಯಾರು ಎನ್ನುವುದು ಇದುವರೆಗೆ ಗುಟ್ಟಾಗಿದ್ದು, ಕುತೂಹಲ ತೀವ್ರಗೊಂಡಿದೆ.
ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ರಾಹುಲ್‌ ಗಾಂಧಿ ಕುಟುಂಬದವರು ಸ್ಪರ್ಧೆ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದ್ದವು. ಈ ಎರಡು ಕ್ಷೇತ್ರಗಳಿಗೂ ಗಾಂಧಿ ಕುಟುಂಬದವರೇ ಸ್ಪರ್ಧೆ ಮಾಡಬೇಕು ಎಂದು ಉತ್ತರಪ್ರದೇಶ ಕಾಂಗ್ರೆಸ್‌ ಹೇಳಿತ್ತು. ಕೊನೆಗೂ ಈಗ ಪತಿ-ಪತ್ನಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗಿದೆ.