ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ-೦೨ ಗಳು ಜರಗುತ್ತಿರುವ ಹಿನ್ನಲೆಯಲ್ಲಿ ಜೂ. 14 ರಿಂದ ಜೂ. 22ರ ವರೆಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ, ನಿಷೇದಾಜ್ಞೆಯನ್ನು ಹೊರಡಿಸಲಾಗಿರುತ್ತದೆ.
ಬೆಳಗಾವಿ ಜಿಲ್ಲೆಯ ೩೩ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ೪೧ ಒಟ್ಟು ೭೪ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೨೦೦ಮೀ ಒಳಗಿನ ಝೆರಾಕ್ಸ್ ಅಂಗಡಿಗಳನ್ನು ಬಂದ ಇಡತಕ್ಕದ್ದು, ವಿದ್ಯಾರ್ಥಿಗಳು, ಸರ್ಕಾರಿ ಬಸ್ಸು ಹಾಗೂ ಇತರೆ ವಾಹನಗಳಿಗೆ ಅಡೆತಡೆ ಉಂಟುಮಾಡುವುದನ್ನು, ಶಾಲಾ/ಕಾಲೇಜು ಸಿಬ್ಬಂದಿಗಳು, ಸರ್ಕಾರದಿಂದ ನೇಮಿಸಿದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಆರಕ್ಷಕ ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದವರಿಗೆ ಶಾಲಾ/ಕಾಲೇಜು ಆವರಣದಲ್ಲಿ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರು ಆದೇಶಿಸಿರುತ್ತಾರೆ.