Join The Telegram | Join The WhatsApp |
ಗದಗ :
ಕೆ. ಎಲ್. ಇ. ಸಂಸ್ಥೆಯ ಎಸ್. ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಟಗೇರಿ ಪೋಲೀಸ್ ಠಾಣೆಯ ಪೋಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಾಶ ಬಣಕಾರ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ‘ಮಾನವ ಹಕ್ಕುಗಳನ್ನು ಪೋಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣದ ತನಿಖೆಯಲ್ಲಿ ಹಾಗೂ ಸಾರ್ವಜನಿಕರೊಡನೆ ಇರುವ ಎಲ್ಲ ವ್ಯವಹಾರಗಳಲ್ಲಿ ರಕ್ಷಿಸಲಾಗುತ್ತದೆ. ಯಾವುದೇ ಬಂಧನ ಇತ್ಯಾದಿ ಪ್ರಕರಣಗಳಲ್ಲಿ ಸ್ಟೇಶನ್ ಹೌಸ ಡೈರಿಯಲ್ಲಿ ಸಂಪೂರ್ಣ ವಿವರಗಳ ಬರೆಯುವಿಕೆ, ನಿಷ್ಪಕ್ಷಪಾತ ಹಾಗೂ ಪಾರದರ್ಶಕ ವ್ಯವಸ್ಥೆಗೆ ಸಿ.ಸಿ. ಕ್ಯಾಮರಾಗಳ ಅಳವಡಿಕೆ, ಆರೋಪಿಗಳಿಗೆ ಕಾನೂನಿನ ನೆರವು ನೀಡುವಿಕೆಯಲ್ಲಿ ಮಾನವ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವ ನಿಟ್ಟಿನಲ್ಲಿ ಪೋಲೀಸ್ ಠಾಣೆಗಳು ಕೆಲಸವನ್ನು ನಿರ್ವಹಿಸುತ್ತಿವೆ. ಆದ್ದರಿಂದ ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯವಾಗಿದೆ’ ಎಂದು ವಿವರಿಸಿದರು.
ದೈಹಿಕ ಶಿಕ್ಷಣ ನಿರ್ದೆಶಕ ಡಾ. ಸಿ. ಬಿ. ರಣಗಟ್ಟಿಮಠ ಅವರು ಎಲ್ಲರಿಗೂ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಕುರಿತಾದ ಕಿರು ಪುಸ್ತಕ ಹಾಗೂ ಕರಪತ್ರಗಳನ್ನು ವಿತರಿಸಿದರು.
ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೀದೇವಿ ಕಾಗನೂರ ಪ್ರಾರ್ಥಿಸಿದರು. ಮಾನವ ಹಕ್ಕುಗಳ ಘಟಕದ ಸಂಯೋಜಕರು ಹಾಗೂ ಸಹಾಯಕ ಪ್ರಾಧ್ಯಾಪಕ ಎಸ್. ಟಿ. ಮೂರಶಿಳ್ಳಿನ ಅವರು ಅತಿಥಿಗಳನ್ನು ಪರಿಚಯಿಸಿ ಎಲ್ಲರನ್ನು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕರು ಹಾಗೂ ಐಕ್ಯೂಎಸಿ ಸಂಯೋಜಕ ಡಾ. ವಿಜಯ ವಿ. ಮುರದಂಡೆ ವಂದಿಸಿದರು. ಪ್ರಾಚಾರ್ಯ ಡಾ. ಎಸ್. ಆರ್. ಪಾಟೀಲ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಾವಿದ್ಯಾಲಯದ ವಿದ್ಯಾರ್ಥಿನಿ ಚೈತ್ರಾ ಗೌಡರ ನಿರೂಪಿಸಿದರು.
Join The Telegram | Join The WhatsApp |