ಬೆಳಗಾವಿ : ಸಿಬಿಐ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಪೇದೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ.
ಉದ್ಯಮಬಾಗ ಪೊಲೀಸ್ ಠಾಣೆಯ ಸಿಪಿಐ ದರೇಗೌಡ ಪಾಟೀಲ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಪೇದೆ ವಿಠಲ ಮುನ್ನಾಳ ಐದು ಪುಟಗಳ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದರು. ರಜೆ ವಿಷಯದಲ್ಲಿ ಸಿಪಿಐ ತಾರತಮ್ಯ ಮಾಡುತ್ತಿದ್ದಾರೆ, ಕರ್ತವ್ಯದಲ್ಲಿದ್ದರೂ ಗೈರು ಹಾಜರಾತಿ ಎಂದು ತೋರಿಸಿ ಪುಸ್ತಕದಲ್ಲಿ ಬರೆಸುತ್ತಾರೆ. ಠಾಣೆಯಲ್ಲಿ ವಿಪರೀತವಾಗಿ ಜಾತೀಯತೆ ಮಾಡುವುದು, ಮಹಿಳಾ ಸಿಬ್ಬಂದಿಯನ್ನು ನಿಂದಿಸುವುದು, ತಾನು ಕಾರ್ಯಾಂಗದ ಅಧಿಕಾರಿಯೆಂಬುದನ್ನು ಮರೆತು ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ. ಹಫ್ತಾ ವಸೂಲಿ ಮಾಡಿ ಕೊಡುವ ಸಿಬ್ಬಂದಿಗೆ ರಾತ್ರಿ ಕರ್ತವ್ಯಕ್ಕೆ ಹಾಕಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿರುವ ವಿಠಲ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕೈ ಬರೆದಲ್ಲಿ ಐದು ಪುಟಗಳ ಪತ್ರ ಬರೆದಿದ್ದರು. ಕರ್ತವ್ಯ ಸರದಿ ಪುಸ್ತಕ ಪ್ರತಿ, ವಿವಿಧ ಆದೇಶ ಪ್ರತಿಗಳ ಸಮೇತ ಪತ್ರವನ್ನು ಹಿರಿಯ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ. ಡಿಜಿ ಐಜಿಪಿ, ಬೆಳಗಾವಿ ನಗರ ಪೊಲೀಸ್ ಆಯುಕ್ತರು, ಖಡೇ ಬಜಾರ್ ಎಸಿಪಿ, ಗೃಹ ಸಚಿವರ ಕಚೇರಿ, ಮಾನವ ಹಕ್ಕು ಆಯೋಗ, ಪೊಲೀಸ್ ದೂರುಗಳ ಪ್ರಾಧಿಕಾರ ಘಟಕಕ್ಕೆ ಪತ್ರ ರವಾನೆ ಮಾಡಿದ್ದಾರೆ.