ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಯನ್ನು ನಡೆಸಿತ್ತು. ಈಗ (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.in ಫಲಿತಾಂಶ ಲಭ್ಯವಾಗಲಿದೆ. ಇದರ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.