ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮಂಡಳಿಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಠಿ ನಂತರ ಮಧ್ಯಾಹ್ನ 12 ಗಂಟೆಯ ನಂತರ https://karresults.nic.in/ಫಲಿತಾಂಶವನ್ನು ಪರಿಶೀಲಿಸಬಹುದು.

2024-25 ರ ದ್ವಿತೀಯ ಪಿಯು ಪರೀಕ್ಷೆ-1 ಮಾರ್ಚ್ 1 ರಿಂದ ಆರಂಭವಾಗಿ ಮಾರ್ಚ್ 20ಕ್ಕೆ ಅಂತ್ಯವಾಗಿತ್ತು. ರಾಜ್ಯದ 5,050 ಪದವಿಪೂರ್ವ ಕಾಲೇಜುಗಳ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.