ಸಂತಿ ಬಸ್ತವಾಡ :
ಸಂತಿಬಸ್ತವಾಡ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಿತು.
ಗ್ರಾಮ ಪಂಚಾಯತ ಅಧ್ಯಕ್ಷೆ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿರವರು ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕುವುದರ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲಸಿಕೆಯನ್ನು ಹಾಕಿಸಿಕೊಳ್ಳಲು ಬಂದವರಿಗೆ ಅರಿವು ನೀಡುವ ಕಾರ್ಯಕ್ರಮ ನಡೆಸಲಾಯಿತು. ಕಿಣಯೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂತಿಬಸ್ತವಾಡ ಆರೋಗ್ಯ ಉಪಕೇಂದ್ರದ ಆರೋಗ್ಯ ಕಾರ್ಯಕರ್ತೆ ಜುಬೇದಾ ಸನದಿರವರು “ಮಕ್ಕಳಿಗೆ ಪೋಲಿಯೋ ಸೋಂಕು ತಗುಲಿದರೆ ಪಾಶ್ವವಾಯು, ಅಂಗವಿಕಲತೆಯೊಂದಿಗೆ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲದೇ ಸಾವು ಕೂಡ ಸಂಭವಿಸಬಹುದು. ಹೀಗಾಗಿ ಪೋಷಕರು ಈ ಮಾರಕ ರೋಗವನ್ನು ತಡೆಗಟ್ಟಲು ತಮ್ಮ ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಪೋಲಿಯೋ ನಿರ್ಮೂಲನೆ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದುದರಿಂದ ಪೊಲಿಯೊ ಲಸಿಕಾ ಕೇಂದ್ರಕ್ಕೆ ಬಂದು ಎಲ್ಲ ಮಕ್ಕಳಿಗೆ ಲಸಿಕೆಯನ್ನು ಹಾಕಿಸಿಕೊಳ್ಳಲು ತಿಳಿಸಿದರು.
ಹಿರಿಯ ಆರೋಗ್ಯ ಅಧಿಕಾರಿ ಸರಸ್ವತಿ ಗುರವ ಅವರು ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ಗ್ರಾಮದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಲಸಿಕೆ ಹಾಕಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು. ವಿದ್ಯಾ ಸಿದ್ಧನ್ನವರ ಸ್ವಾಗತಿಸಿದರು. ರಾಜಶ್ರೀ ಹೊಳೆಪ್ಪಗೋಳ ವಂದಿಸಿದರು. ಇಸಬೆಲ್ಲಾ ಬೀಟಿ ನಿರೂಪಿಸಿದರು.