ಪುತ್ತಿಲ ಕಮಲ ಪ್ರವೇಶ ಬಹುತೇಕ ಖಚಿತ

ಪುತ್ತೂರು :
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗಮನ ಸೆಳೆದಿದ್ದ ಅರುಣ್ ಕುಮಾರ್ ಪುತ್ತಿಲ ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಇಷ್ಟರಲ್ಲೇ ಅವರು ಬಿಜೆಪಿ ಸೇರಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿಯಾಗಿ ಅರುಣ್‌ ಪುತ್ತಿಲ ಸ್ಥಾನಮಾನದ ಬಗ್ಗೆ ಅಂತಿಮ ನಡೆಸಲಿದ್ದಾರೆ ಎನ್ನುವ ಮಾಹಿತಿ ಇದೆ.

ಪುತ್ತೂರಿನಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಕಾಂಗ್ರೆಸಿಗೆ ಪೈಪೋಟಿ ನೀಡಿದ್ದಲ್ಲದೆ ಬಿಜೆಪಿಯನ್ನು ಹೀನಾಯ ರೀತಿಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದರಿಂದ ರಾಜ್ಯ ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಈಗ ರಾಜ್ಯ ಬಿಜೆಪಿಯಲ್ಲಿ ತಂಡ ಬದಲಾಗಿದ್ದು ಮಾಜಿ ಸಿಎಂ ಯಡಿಯೂರಪ್ಪ ಅವರೇ ಪಕ್ಷದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರಿನ ಬಿಜೆಪಿ ನಾಯಕರ ವಿರೋಧ ಇದ್ದರೂ ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದು ಲೋಕಸಭೆ ಚುನಾವಣೆಗೆ ಬಂಡಾಯ ತಣ್ಣಗಾಗಿ
ಪುತ್ತೂರು ಸ್ವತಂತ್ರ ಅಭ್ಯರ್ಥಿ ಅರುಣ್ ಪುತ್ತಿಲ ಮತ್ತೆ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಲು ಬಿಜೆಪಿ ಪಕ್ಷಕ್ಕೆ ಮೂರು ದಿನಗಳ ಗಡುವು ನೀಡಿತ್ತು. ಇದನ್ನು ಪಾಲಿಸಲು ಬಿಜೆಪಿ ವಿಫಲವಾದರೆ ಪುತ್ತಿಲ ಪರಿವಾರ ಸಂಕಲ್ಪ ಮಾಡಿದೆ.

ಅವರ ಸ್ಪರ್ಧೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಪುತ್ತೂರಿನ ಪುತ್ತಿಲ ಪರಿವಾರವನ್ನು ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸಲು ರಾಜ್ಯ ನಾಯಕರು ಗ್ರೀನ್ ಸಿಗ್ನಲ್‌ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ಮಾಹಿತಿ ಹಂಚಿಕೊಂಡಿದ್ದಾರೆ.

ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರೇ ಪುತ್ತಿಲ ಪರಿವಾರದ ವಿಲೀನ ಮತ್ತು ಬಂಡಾಯ ಸ್ಪರ್ಧಿಸಿದ್ದ ಅರುಣ್ ಪುತ್ತಿಲ ಅವರಿಗೆ ಸೂಕ್ತ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನಗೊಳ್ಳಲು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಜೊತೆಗೆ ಸೇರ್ಪಡೆಗೆ ಮೂರು ದಿನಗಳ ಗಡುವನ್ನು ವಿಧಿಸಿತ್ತು. ಆ ಗಡುವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ರಾಜ್ಯ ನಾಯಕರು ಪುತ್ತಿಲ ಪರಿವಾರಕ್ಕೆ ನೀಡಿದ್ದಾರೆ ಎನ್ನಲಾಗಿದೆ.