ಬೆಳಗಾವಿ : ಪ್ರಸಕ್ತ ಸಾಲಿನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯು ಮಾ.೧೧ ರಂದು ಬೆಳಗ್ಗೆ ೧೧ ಗಂಟೆಗೆ ಹಳೆ ಜಿಲ್ಲಾ ಪಂಚಾಯತ್ ಸಭಾಂಗಣ ಬೆಳಗಾವಿಯಲ್ಲಿ ಮಂಗಲಾ ಸುರೇಶ ಅಂಗಡಿ, ಲೋಕಸಭಾ ಸದಸ್ಯರು ಹಾಗೂ ಅಧ್ಯಕ್ಷರು ಬೆಳಗಾವಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ.