ಹೆಬ್ರಿ : ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಎ. ಝಡ್. ಮಾರ್ಷಲ್ ಆರ್ಟ್ಸ್ ಅಕಾಡೆಮಿ ರಿಜಿಸ್ಟರ್ಡ್ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನಶಿಪ್ ನಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಚಿತಾ ಕುಲಾಲ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಇವಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.