ಬೆಂಗಳೂರು : ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಬಲ ನಾಯಕರಿಬ್ಬರ ಹುದ್ದೆಗಳನ್ನೇ ಬದಲಿಸಿ ಸಂಭೋದಿಸಿದರು.

ಖರ್ಗೆ ಜಿ, ಕಾಂಗ್ರೆಸ್‌ ಅಧ್ಯಕ್ಷ ಸಿದ್ದರಾಮಯ್ಯ ಜಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿ, ಕೆ.ಎಚ್‌. ಮುನಿಯಪ್ಪ ಜಿ ಎಂದು ಭಾಷಣ ಆರಂಭಿಸಿದರು.

ಲೋಕಸಭಾ ಚುನಾವಣೆ ನಂತರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಅಗಲಿದ್ದಾರೆ ಎಂಬ ವದಂತಿ ನಡುವೆ ರಾಹುಲ್ ಗಾಂಧಿ ಮಾತನಾಡಿರುವುದು ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.