ನವದೆಹಲಿ: ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಇಲ್ಲಿ ಸಭೆ ಸೇರಲು ಸಜ್ಜಾಗಿರುವಾಗಲೇ, ಪಕ್ಷದ ಅತ್ಯುನ್ನತ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ದೇಶದ ಉತ್ತರ ಮತ್ತು ದಕ್ಷಿಣದ ರಾಜ್ಯಗಳಿಂದ ಕಣಕ್ಕೆ ಇಳಿಸಲು ಪಕ್ಷ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಕೇರಳದ ವಯನಾಡಿನಲ್ಲಿ ಗೆದ್ದಿದ್ದರಾದರೂ, ಉತ್ತರಪ್ರದೇ ಶದ ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ಈ ಬಾರಿ ವಯನಾಡಿನಲ್ಲಿ ಇಂಡಿಯಾ ಮೈತ್ರಿಕೂಟದ ಸಿಪಿಎಂ ತನ್ನ ಅಭ್ಯರ್ಥಿ ಕಣಕ್ಕೆ ಇಳಿಯುವುದಾಗಿ ಘೋಷಿಸಿರುವ ಕಾರಣ ರಾಹುಲ್ ಕಣಕ್ಕಿಳಿ ಯುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.
ಅಮೇಠಿಯಲ್ಲಿ ಗೆಲ್ಲುವ ಸಾಧ್ಯತೆ ಕಡಿಮೆ ಇರುವ ಕಾರಣ ಅಲ್ಲಿಂದಲೂ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.