ಬೆಂಗಳೂರು : ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗ್ಗೆ 10.30 ಕ್ಕೆ ಕಾವೇರಿ ಭವನ ಹಿಂಭಾಗದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ನಂತರ 11.30 ಕ್ಕೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಶುಕ್ರವಾರ ಬಂದಿಳಿದ ಕಾಂಗ್ರೆಸ್ ರಾಷ್ಟ್ರೀಯ ವರಿಷ್ಠ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.