ದೆಹಲಿ : ಕಾಂಗ್ರೆಸ್ ನ ಅಧಿನಾಯಕ ರಾಹುಲ್ ಗಾಂಧಿ ಇದೀಗ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನ ಪಡೆದುಕೊಂಡಿರುವ ಕಾರಣಕ್ಕಾಗಿ ರಾಹುಲ್ ಗಾಂಧಿ ಅವರು ಈ ಸ್ಥಾನ ವಹಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ 99 ಸ್ಥಾನ ಪಡೆದುಕೊಂಡಿತ್ತು. ಆದರೆ, ಸಾಂಗ್ಲಿ ಪಕ್ಷೇತರ ಸಂಸದ ವಿಶಾಲ್ ಪಾಟೀಲ್ ಗುರುವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಇದರಿಂದ ಇದೀಗ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ 100 ಸಂಸದರನ್ನು ಹೊಂದಿದಂತಾಗಿದೆ.