Join The Telegram | Join The WhatsApp |
ನವದೆಹಲಿ:
2024ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರು ಹೇಳಿದರು.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, ‘ರಾಹುಲ್ ಅವರು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ಈ ದೇಶದ ಸಾಮಾನ್ಯ ಜನರಿಗಾಗಿ ಅವರು ರಾಜಕಾರಣದಲ್ಲಿದ್ದಾರೆ’ ಎಂದು ಹೇಳಿದರು.
ಇದೇ ವೇಳೆ ರಾಹುಲ್ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯನ್ನು ಶ್ಲಾಘಿಸಿದ ಅವರು, ‘ಇಷ್ಟು ದೊಡ್ಡ ಪ್ರಮಾಣದ ಪಾದಯಾತ್ರೆ ಕೈಗೊಂಡವರು ಜಗತ್ತಿನ ಚರಿತ್ರೆಯಲ್ಲಿ ಯಾರೂ ಇಲ್ಲ. ಗಾಂಧಿ ಕುಟುಂಬವನ್ನು ಬಿಟ್ಟು ಬೇರಾವ ಕುಟುಂಬವೂ ದೇಶಕ್ಕಾಗಿ ಇಷ್ಟೊಂದು ತ್ಯಾಗ ಮಾಡಿಲ್ಲ’ ಎಂದರು.
Join The Telegram | Join The WhatsApp |