ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ದೆಹಲಿ ಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ಬಹಿರಂಗ ಸಮಾವೇಶದಲ್ಲಿ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲಿರುವ ಅವರು, ಬಳಿಕ ಸಂಜೆ ವೇಳೆಗೆ ಕೋಲಾರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರಾಜ್ಯಕ್ಕೆ ಆಗಮಿಸಿ ಬಿಜೆಪಿ ಪರ ಮತಬೇಟೆ ಮಾಡಿದ್ದರು. ಆದರೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಈವರೆಗೆ ಒಮ್ಮೆಯೂ ಆಗಮಿಸಿರಲಿಲ್ಲ. ಆದರೀಗ ಬುಧವಾರ ಮಂಡ್ಯ ಹಾಗೂ ಕೋಲಾರದಲ್ಲಿ ಪ್ರಚಾರ ನಡೆಸುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಕಾರ್ಯ ಕರ್ತರಿಗೆ ‘ಬೂಸ್ಟರ್’ ನೀಡಲಿದ್ದಾರೆ ಎನ್ನಲಾಗಿದೆ. ಅವರ ಕರ್ನಾಟಕ ಭೇಟಿ ಕಾಂಗ್ರೆಸ್ ನಾಯಕರಿಗೆ ಹೊಸ ಚೈತನ್ಯ ತರುವ ನಿರೀಕ್ಷೆ ಮೂಡಿಸಿದೆ.