ಬೆಳಗಾವಿ: ಕೇರಳಕ್ಕೆ ಹೋಗುವ ಮಾರ್ಗದ ಮಧ್ಯೆ ಮಂಗಳವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಈ ಬಳಿಕ ನಿಲ್ದಾಣದ ದ್ವಾರದೊಳಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಂಟ್ರಿಯಾಗುತ್ತಿದ್ದಂತೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಕೈಯನ್ನು ಹಿಡಿದುಕೊಂಡು ಲವಲವಿಕೆಯಿಂದ ಮುಂದೆ ಸಾಗಿದರು. ಅಲ್ಲದೇ ಗಡಿಭಾಗವಾದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರಿಯನ್ನು ಕಣಕ್ಕಿಳಿಸಿ ಜೊಲ್ಲೆ ವಿರುದ್ಧ ಜಯ ಸಾಧಿಸುವಂತೆ ಮಾಡಿ, ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಿದ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಭಿನಂದನೆ ಸಲ್ಲಿಸಿದರು.

ಜಾರಕಿಹೊಳಿ ಅವರ ಕೈ ಹಿಡಿದುಕೊಂಡೇ ಸಾಗಿದ ರಾಹುಲ್‌: ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಎಲ್ಲರನ್ನು ಬಿಟ್ಟು ಮೊದಲು ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಕೈ ಹಿಡಿದುಕೊಂಡೇ ಸಾಗಿದರು. ಈ ವೇಳೆ ಬೆಳಗಾವಿ ಜಿಲ್ಲೆ ಸೇರಿದಂತೆ ವಿವಿಧಡೆ ನಡೆದ ಚುನಾವಣೆ ಕುರಿತು ಸಚಿವರ ಜೊತೆ ಮಾಹಿತಿ ಕಲೆ ಹಾಕಿದರು. ಸಚಿವ ಸತೀಶ್‌ ಜಾರಕಿಹೊಳಿ ಕೈ ಹಿಡಿದು ನಡೆದ ರಾಹುಲ್ ಗಾಂಧಿ ಈ ಸರಳ ನಡೆ ಎಲ್ಲರ ಹುಬ್ಬೆರಿಸುವಂತೆ ಮಾಡಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಚಿವರಾದ ಜಿ.ಪರಮೇಶ್ವರ, ಸಿಎಂ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ ಸೇರಿದಂತೆ ಇತರರು ಇದ್ದರು.