ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಐಎಂಡಿ ಪ್ರಕಾರ ಏಪ್ರಿಲ್ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಅದು ಹೇಳಿದೆ.
ಮೇ 1ರಂದು ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮೇ 2ರಂದು ಬೀದರ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ.
ಮೇ 3ರಂದು ಕೊಡಗು, ಮೈಸೂರು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಏಪ್ರಿಲ್ 30 ರವರೆಗೆ ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹೆಚ್ಚಿನ ಬಿಸಿಲಿನ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.