ಬೆಂಗಳೂರು : ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೆಲವೆಡೆ ಹಗುರ ಮಳೆ ಸುರಿಯುತ್ತಿದೆ. ಉಳಿದೆಡೆ ಒಣ ಹವೆ ಮುಂದುವರಿಯಲಿದೆ. ಬಿಸಿಲು ಹೆಚ್ಚಳವಾದಂತೆ ಅಲ್ಲಲ್ಲಿ ಮಳೆ ಬರಲಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಏರಿಳಿತವಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.