ಬೆಂಗಳೂರು : ರಾಜ್ಯದ ಕೆಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ.

ಮೇ 9ರಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಬೀದ‌ರ್, ಕಲಬುರಗಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮುಂದಿನ ಎರಡು ದಿನಗಳಲ್ಲಿ ಇದೇ ವಾತಾವರಣ ಮುಂದುವರಿಯಲಿದ್ದು, ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ನಂತರ ರಾಜ್ಯದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ.