
ಉಡುಪಿ/ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಅಂಗನವಾಡಿ ಮತ್ತು ಒಂದರಿಂದ ಹತ್ತನೇ ತರಗತಿವರೆಗೆ ಮೇ 30ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತಿಳಿಸಿದ್ದಾರೆ.