Join The Telegram | Join The WhatsApp |
ಬೆಂಗಳೂರು-
ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ‘ರೈತ ಶಕ್ತಿ’ ಯೋಜನೆಗೆ ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್ ಇಂಧನದ ಮೇಲೆ ಬಹುತೇಕ ಅವಲಂಬಿತವಾ ಗಿದೆ. ಹೀಗಾಗಿ ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆ ಜಾರಿಗೆ ತರಲಾಗುತ್ತಿದೆ.
ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಹೊರೆ ಇಳಿಸಲು ರೈತ ಶಕ್ತಿ ಯೋಜನೆ ಜಾರಿಯಾಗಲಿದೆ.
ಪ್ರತಿ ಎಕರೆ 250 ರೂ.ಗಳಂತೆ ಗರಿಷ್ಠ 5 ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್‌ಗೆ ಸಹಾಯಧನವನ್ನು ನೀಡುವ ರೈತ ಶಕ್ತಿ ಯೋಜನೆಯಡಿ ಸಿಎಂ ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.
Join The Telegram | Join The WhatsApp |