ಬೆಳಗಾವಿ :
ಕೆಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಸ್ವಾಯತ್ತ ಮಹಾವಿದ್ಯಾಲಯ ಬೆಳಗಾವಿ ಮಹಿಳೆಯರ ಶಟಲ್ ಬ್ಯಾಡ್ಮಿಂಟನ್ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.

ಬೆಳಗಾವಿ ಚನ್ನಮ್ಮ ವಿಶ್ವವಿದ್ಯಾಲಯ ಅಂತರ್ ಕಾಲೇಜು ಪಂದ್ಯಾವಳಿಯ ಆಯ್ಕೆಯು ಕಾಗವಾಡ ಶಿವಾನಂದ ಮಹಾವಿದ್ಯಾಲಯ 5 ಮತ್ತು 6 ಡಿಸೆಂಬರ್ 2023 ರಂದು ನಡೆಯಿತು.

ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮತ್ತು ಆಡಳಿತ ಮಂಡಳಿಯ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಪ್ರಾಚಾರ್ಯೆ ಡಾ.ಜೆ. ಎಸ್. ಕವಳೇಕರ್, ಆಜೀವ ಸದಸ್ಯರಾದ ಎಸ್.ಜಿ. ನಂಜಪ್ಪನವರ ಹಾಗು ಡಾ. ಸತೀಶ ಎಂ.ಪಿ. ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶಿವಾನಂದ ಬುಲಬುಲೆ ಹಾಗೂ ಸಿಬ್ಬಂದಿಯವರು ಅಭಿನಂದಿಸಿದರು.