ಬೆಂಗಳೂರು :
ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಗುರುವಾರ ವಯೋನಿವೃತ್ತರಾದ ಹಿನ್ನೆಲೆಯಲ್ಲಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಜನೀಶ್ ಗೋಯಲ್ 1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, 2024ರ ಜುಲೈನಲ್ಲಿ ನಿವೃತ್ತರಾಗಲಿದ್ದಾರೆ. ಈವರೆಗೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ರಜನೀಶ್ ಗೋಯಲ್ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಸೇವಾಜೇಷ್ಠತೆ ಆಧಾರ ದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಗೊಂಡಿದ್ದಾರೆ.

ರಜನೀಶ್ ಅವರಿದ್ದ ಹಿಂದಿನ ಗೃಹ ಇಲಾಖೆಯ ಅಪರ ಕಾರ್ಯದರ್ಶಿ ಸ್ಥಾನಕ್ಕೆ ಉಮಾಶಂಕರ್ ಎಸ್.ಆ‌ರ್ . ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.