ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ರಾಜಶ್ರೀ ಜೈನಾಪುರೆ ಅವರನ್ನು ನೇಮಕ ಮಾಡಲಾಗಿದೆ.

ಈ ಹುದ್ದೆಯಿಂದ ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ ಅಶೋಕ ದುಡಗುಂಟಿ ಅವರ ಸ್ಥಾನಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜಶ್ರೀ ಕೆಎಎಸ್ ಶ್ರೇಣಿಯ ಅಧಿಕಾರಿ. ಇವರು ಈ ಹಿಂದೆ ಖಾನಾಪುರ ತಹಸೀಲ್ದಾರ್, ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.