ದೆಹಲಿ : ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣ ಭಾಂಡಗೆ, ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ, ಡಾ. ಭೀಮಸಿಂಗ್, ಛತ್ತೀಸಗಢದಲ್ಲಿ ದೇವೇಂದ್ರ ಪ್ರತಾಪ್ ಸಿಂಗ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಹರಿಯಾಣ: ಸುಭಾಷ್ ಬರಾಲಾ, ಉತ್ತರ ಪ್ರದೇಶ: ಸುಧಾಂಶು ತ್ರಿವೇದಿ, ಆರ್‌ಪಿಎನ್ ಸಿಂಗ್, ಚೌಧರಿ ತೇಜ್‌ವೀರ್ ಸಿಂಗ್, ಸಾಧನಾ ಸಿಂಗ್, ಅಮರ್‌ಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್, ಉತ್ತರಾಖಂಡ: ಮಹೇಂದ್ರ ಭಟ್, ಪಶ್ಚಿಮ ಬಂಗಾಳ: ಸಾಮಿಕ್ ಭಟ್ಟಾಚಾರ್ಯ ಟಿಕೆಟ್ ಪಡೆದ ಪ್ರಮುಖರು.

ಉತ್ತರ ಕರ್ನಾಟಕದ ನಾಯಕನಿಗೆ ಮಣೆ ಹಾಕಿದ ಬಿಜೆಪಿ :
ಕೇಂದ್ರ ಸಚಿವ ರಾಜೀವ್ ಚಂದ್ರಶೇಖ‌ರ್ ಅವರ ರಾಜ್ಯಸಭಾ ಸದಸ್ಯತ್ವ ಏ.2ರಂದು ಮುಕ್ತಾಯವಾಗಲಿದೆ. ಈ ಸ್ಥಾನಕ್ಕೆ ಫೆ.27ರಂದು ಚುನಾವಣೆ ನಡೆಯಲಿದೆ. ರಾಜ್ಯದ 4 ಸದಸ್ಯರ ಸ್ಥಾನ ಖಾಲಿ ಆಗಲಿದ್ದು, ಈ ಪೈಕಿ ಒಂದು ಸ್ಥಾನ ಬಿಜೆಪಿ ಪಾಲಾಗಲಿದೆ. ಈ ಸ್ಥಾನಕ್ಕೆ ರಾಜ್ಯದವರೇ ಆದ ನಾರಾಯಣ ಸಾ. ಭಾಂಡಗೆ ಅವರಿಗೆ ಟಿಕೆಟ್ ಘೋಷಿಸಿದೆ. ಇವರು ಈ ಹಿಂದೆ ಅಂದರೆ 2010ರಿಂದ 2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಶಾಸಕರಿಂದ ಆಯ್ಕೆಯಾಗಿದ್ದರು. ಇವರು ಉತ್ತರ ಕರ್ನಾಟಕ ಭಾಗದ ಕಟ್ಟ ಬಿಜೆಪಿ ಕಾರ್ಯಕರ್ತರಾಗಿ ಹಾಗೂ ನಾಯಕರಾಗಿ ಮೊದಲಿನಿಂದಲೂ ಗುರುತಿಸಿಕೊಂಡಿದ್ದಾರೆ. ಖಡಕ್ ಮಾತುಗಳಿಂದಲೂ ಇವರು ಪ್ರಸಿದ್ಧಿ ಪಡೆದುಕೊಂಡಿದ್ದಾರೆ.

ನಾರಾಯಣಸಾ ಕೃಷ್ಣಸಾ ಭಾಂಡಗೆ ಅವರು ಉತ್ತರ ಕರ್ನಾಟಕದ ಬಾಗಲಕೋಟೆ ಮೂಲದವರಾಗಿದ್ದು, ಕರ್ನಾಟಕದ ಎಸ್‌ಎಸ್‌ಕೆ ಸಮಾಜದ ಮುಖಂಡರೂ ಹೌದು. ಬಿಜೆಪಿಯ ಒಬಿಸಿ ಘಟಕದ ನಾಯಕರು. ಒಂದು ಬಾರಿ ಬಿಜೆಪಿ ರಾಜ್ಯ ಉಪಾಧ್ಯಕ್ಷರು, ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ರಾಜ್ಯಸಭೆಯ ಈ ಸ್ಥಾನಕ್ಕೆ ಕರ್ನಾಟಕದಿಂದ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೆಸರು ಬಲವಾಗಿ ಕೇಳಿ ಬಂದಿತ್ತು. ಆದರೆ ಇದೀಗ ಈ ಇಬ್ಬರು ನಾಯಕರಿಗೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಆದರೆ ಇದೀಗ ಈ ಇಬ್ಬರು ನಾಯಕರಿಗೆ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಹನ್ನೆರಡು ಜನರಿಗೆ ಟಿಕೆಟ್ :

1.ಧರ್ಮಶೀಲಾ ಗುಪ್ತಾ: ಬಿಹಾರ

2.ಡಾ.ಭೀಮ್ ಸಿಂಗ್‌: ಬಿಹಾರ

3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ

4.ಸುಭಾಷ್ ಬರಲಾ: ಹರಿಯಾಣ

5.ನಾರಾಯಾಣ ಭಾಂಡಗೆ: ಕರ್ನಾಟಕ

6.ಆರ್‌ಪಿಎನ್ ಸಿಂಗ್‌: ಉತ್ತರ ಪ್ರದೇಶ

7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ

8.ಚೌಧರಿ ತೇಜ್‌ವೀರ್ ಸಿಂಗ್: ಉತ್ತರ ಪ್ರದೇಶ

9.ಸಾಧನಾ ಸಿಂಗ್: ಉತ್ತರ ಪ್ರದೇಶ

10. ಅಮರಪಾಲ್ ಮೌರ್ಯ: ಉತ್ತರ ಪ್ರದೇಶ

11.ಸಂಗೀತಾ ಬಲ್ವಂತ್‌: ಉತ್ತರ ಪ್ರದೇಶ

12.ನವೀನ್ ಜೈನ್: ಉತ್ತರ ಪ್ರದೇಶ

13.ಮಹೇಂದ್ರ ಭಟ್: ಉತ್ತರಾಖಂಡ್

14. ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ