ಬೆಂಗಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಾರಿ ರಾಜ್ಯದ ಸುಮಾರು 69 ಸಾಧಕರಿಗೆ ಪ್ರಶಸ್ತಿ ನೀಡುವ ಸಾಧ್ಯತೆ ಇದೆ. 5 ಲಕ್ಷ ರೂ. ನಗದು ಹಾಗೂ 25 ಗ್ರಾಂ ಚಿನ್ನ ನೀಡಲಾಗುತ್ತಿದೆ. ಈಗಾಗಲೇ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರರ ಪಟ್ಟಿ ಅಂತಿಮವಾಗಿದ್ದು ಇಷ್ಟರಲ್ಲೇ ಬಿಡುಗಡೆಯಾಗಲಿದೆ.