ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಸಾಹಿತಿ ಎಂ. ವೀರಪ್ಪ ಮೊಯ್ಲಿ ಅವರಿಗೆ ಈ ಸಲ ಸಾಹಿತ್ಯ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಆರು ಸಲ ಶಾಸಕರಾಗಿ ಆಯ್ಕೆಯಾಗಿ 1992-94ರ ಅವಧಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದರು. ಮಂಗಳೂರು ಲೋಕಸಭಾ ಮತಕ್ಷೇತ್ರದಿಂದ ಸೋಲು ಅನುಭವಿಸಿದ ಅವರು 2009ರಲ್ಲಿ ಚಿಕ್ಕಬಳ್ಳಾಪುರದಿಂದ ಗೆಲುವು ಸಾಧಿಸಿ ಮನಮೋಹನ್ ಸಿಂಗ್ ಸರಕಾರದಲ್ಲಿ ಕೇಂದ್ರ ಕಾನೂನು ಮತ್ತು ಪೆಟ್ರೋಲಿಯಂ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2014ರಲ್ಲಿ ಮತ್ತೊಮ್ಮೆ ಚಿಕ್ಕಬಳ್ಳಾಪುರ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು. ಕಾನೂನು ಪದವೀಧರರಾದ ಅವರು ಸಾಹಿತಿಯಾಗಿಯೂ ಹಲವಾರು ಕೃತಿಗಳನ್ನು ರಚನೆ ಮಾಡಿದ್ದಾರೆ.

ಮಹಾಕಾವ್ಯಗಳಾದ
ಶ್ರೀರಾಮಾಯಣ ಮಹಾನ್ವೇಷಣಂ,
ಶ್ರೀಬಾಹುಬಲಿ ಅಹಿಂಸಾದಿಗ್ವಿಜಯಂ ಸೇರಿದಂತೆ ಹಲವು ಕಾದಂಬರಿಗಳು ಮತ್ತು ಸಾಹಿತ್ಯ ರಚಿಸಿ ಗಮನ ಸೆಳೆದಿದ್ದಾರೆ.