ಉಡುಪಿ: ಉಡುಪಿಯ ಬೈಲೂರಿನ ನೀಲಕಂಠ ಬಬ್ಬು ಸ್ವಾಮಿ ಕೊರಗಜ್ಜ ದೈವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ ನೀಡಿದ್ದಾರೆ. ಉಡುಪಿಗೆ ಆಗಮಿಸಿದಾಗ ರಕ್ಷಿತ್ ಶೆಟ್ಟಿ ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ ನೀಡುತ್ತಾರೆ. ಇತ್ತೀಚಿಗೆ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಭಾಗವಹಿಸಿದ್ದರು. ಇದೀಗ ಮತ್ತೆ ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.