ಬೆಳಗಾವಿ : ಬರ ಹಿನ್ನೆಲೆಯಲ್ಲಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ರಾಮರಡ್ಡಿ ಪಾಟೀಲ ಹೇಳಿದರು.

ಸ್ಥಳೀಯ ತಾಲ್ಲೂಕು ಪಂಚಾಯತ ಸಭಾಭವನದಲ್ಲಿ ಆಯೋಜಿಸಿದ್ದ ಗ್ರಾಮೀಣ ಪ್ರದೇಶದ ಕುಡಿಯುವ ನೀರಿನ ವ್ವವಸ್ಥೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿನ ಅಭಾವ ಇರುವ ಗ್ರಾಮ ಪಂಚಾಯತಿಯವರು ಮುಂಜಾಗ್ರತೆ ವಹಿಸಿ ಮೇಲಾಧಿಕಾರಿಗಳಗೆ ವರದಿ ಮಾಡಬೇಕು. ಯಾವುದೇ ಗ್ರಾಮಗಳಲ್ಲಿ ಕೂಡಿಯುವ ನೀರಿನ ತೊಂದರೆಯಾಗಂತೆ ನೋಡಿಕೊಳ ಬೇಕು. ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಿಗೆ ಪಿಡಿಒ ಅವರು ಭೇಟಿ ನೀಡಿ ಕುಡಿಯುವ ನೀರಿನ ಕುರಿತ ಮಾಹಿತಿಯನ್ನು ಪಡೆದುಕೊಂಡು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.

ಕೆಲವು ಗ್ರಾಮಗಳಲ್ಲಿ ಜೆಜೆಎಮ್ ಕಾಮಗಾರಿಗಳು ಪೂರ್ಣವಾಗಿವೆ. ಅಂತಹ ಗ್ರಾಮಗಳಲ್ಲಿ ಪೈಪ್ ಲೈನ್ ಜೋಡಿಸಿ ಗ್ರಾಮಗಳಿಗೆ ನೀರನ್ನು ಸರಬರಾಜು ಮಾಡಬೇಕು. ಅಗತ್ಯ ಇರುವ ಗ್ರಾಮಗಳ್ಲಲಿ ಖಾಸಗಿ ಬೋರ್ವೆಲ್ ಗಳ ಮೂಲಕ ಗ್ರಾಮಗಳಿಗೆ ನೀರು ಪೊರೈಸಬೇಕು ಎಂದು ಹೇಳಿದರು.