Join The Telegram | Join The WhatsApp |
ಬೆಳಗಾವಿ:
ಬೆಳಗಾವಿ ಗ್ರಾಮಿಣ ಮತಕ್ಷೇತ್ರದ ಸುಳೇಭಾವಿ ಗ್ರಾಮದಲ್ಲಿ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದ ವತಿಯಿಂದ ಜ. 20 ರಂದು ಸಂಜೆ 4 ಗಂಟೆಗೆ ರಮೇಶ ಜಾರಕಿಹೊಳಿ ಅಭಿಮಾನಿಗಳಿಂದ ಅಭಿಮಾನದ ಕಾರ್ಯಕರ್ತರ ಸಮಾವೇಶ ಗ್ರಾಮದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಗೋಕಾಕ ಶಾಸಕ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ಸಮಾವೇಶಕ್ಕೆ ಆಗಮಿಸುವ ಜನರಿಗೆ ಎರಡು ಕಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಸಮಾವೇಶ ಹಮ್ಮಿಕೊಂಡಿದ್ದಾರೆ.
ವಾರದ ಹಿಂದೆಯಷ್ಟೇ ಹಿಂಡಲಗಾ ಗ್ರಾಮದಲ್ಲಿಯೂ ರಮೇಶ ಜಾರಕಿಹೊಳಿ ಅಭಿಮಾನಿಗಳು ಸಮಾವೇಶ ನಡೆಸಿದ್ದರು. ಈಗ ಮತ್ತೊಂದು ಸಮಾವೇಶಕ್ಕೆ ಗ್ರಾಮೀಣ ಕ್ಷೇತ್ರ ಸಿದ್ಧಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
Join The Telegram | Join The WhatsApp |