Join The Telegram | Join The WhatsApp |
ಬೆಳಗಾವಿ :
ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಬರುವುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಪತ್ರಕರ್ತರ ಜೊತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 ವರ್ಷ ಬಿಜೆಪಿಯನ್ನು ಅಲುಗಾಡಿಸಲು ಯಾರಿಂದಲೂ ಆಗುವುದಿಲ್ಲ. ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಉಸಿರಾಡುತ್ತಿದ್ದು ಅದಕ್ಕೆ ಭವಿಷ್ಯ ಇಲ್ಲ ಎಂದು ಹೇಳಿದರು.
Join The Telegram | Join The WhatsApp |