ಬೆಳಗಾವಿ :
ರಾಣಿ ಪಾರ್ವತಿ ದೇವಿ ಮಹಾವಿದ್ಯಾಲಯ ದಿನಾಂಕ 11.12.2023 ಮತ್ತು 12.12.2023 ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಹಾಕಿ ಪಂದ್ಯಾವಳಿಯನ್ನು ಆಯೋಜಿಸಿತ್ತು.

ಪಂದ್ಯಾವಳಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಪುರುಷರ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದುಕೊಂಡರು.

ವಿದ್ಯಾರ್ಥಿಗಳ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ವಿದ್ಯಾರ್ಥಿಗಳನ್ನು ಪ್ರಶಂಸಿದರು. ಸಾಂಸ್ಕೃತಿಕ ವೇದಿಕೆಯ ಸಂಯೋಜಕ ಡಾ. ಅರ್ಜುನ ಜಂಬಗಿ, ಐ ಕ್ಯೂ ಎ ಸಿ ಸಂಯೋಜಕ ಡಾ. ಮುಕುಂದ ಮುಂಡರಗಿ, ತರಬೇತುದಾರ ಡಾ. ಗಿರಿಜಾಶಂಕರ್ ಮಾನೆ, ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕ ಬಸವರಾಜ ಕುಮಶಿ ಮತ್ತು ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.