ಕುಕನೂರು (ಕೊಪ್ಪಳ): ನನ್ನನ್ನು ಹಣಕಾಸು ಮಂತ್ರಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕೋರಿದ್ದೇನೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದ್ದಾರೆ. ಹಣಕಾಸು ಮಂತ್ರಿ ಆದರೆ ಹಲವಾರು ಜನಪ್ರಿಯ ಕಾರ್ಯಗಳಿಗೆ ಆದ್ಯತೆ ನೀಡುತ್ತೇನೆ. ಪುರುಷರಿಗೂ ಉಚಿತ ಬಸ್‌ ಪ್ರಯಾಣ ಯೋಜನೆ ನೀಡಲು ಬಜೆಟಿನಲ್ಲಿ ಚಿಂತಿಸಿದ್ದೆ, ಮುಂಬರುವ ದಿನಗಳಲ್ಲಿ 65 ವರ್ಷ ಮೇಲ್ಪಟ್ಟ ಪುರುಷರಿಗೆ ಉಚಿತ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದಿದ್ದಾರೆ.