ಬೆಂಗಳೂರು : ಒಂದು ವೇಳೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳಲು ಹಿಂದೇಟು ಹಾಕಿದರೆ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಲು ಶುರುವಾಗಿದ್ದು, ಅದಕ್ಕೆ ಪರ್ಯಾಯವಾಗಿ ಹೆಸರೊಂದು ಕೇಳಿ ಬಂದಿದೆ. ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್‌ ಮೂಲಕವೇ ಹೆಸರುವಾಸಿಯಾಗಿರುವ ರಜತ್ ಪಾಟಿದಾರ್ ಅವರನ್ನು ಆರ್‌ಸಿಬಿ ನಾಯಕನನ್ನಾಗಿ ನೇಮಿಸುತ್ತದೆ ಎಂದು ವರದಿಯಾಗಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ.

ಆರ್‌ಸಿಬಿ ತಂಡದಲ್ಲಿ ಪ್ರಸ್ತುತ 22 ಆಟಗಾರರಿದ್ದು, ನಾಯಕತ್ವದ ಅನುಭವ ಹೊಂದಿರುವವರು ವಿರಾಟ್ ಕೊಹ್ಲಿ ಮಾತ್ರ. ಹೀಗಾಗಿ ಆರ್‌ಸಿಬಿ ಫ್ರಾಂಚೈಸಿ ಕ್ಯಾಪ್ಟನ್ಸಿ ಸ್ಥಾನಕ್ಕೆ ವಿರಾಟ್‌ಗೆ ಮಣೆ ಹಾಕುವುದು ಪಕ್ಕಾ ಆಗಿದೆ. ವಿರಾಟ್‌ಗೆ ನಾಯಕನ ಪಟ್ಟ ನೀಡಲು ಈ ಬಾರಿಯ ಮೆಗಾ ಹರಾಜಿನಲ್ಲಿ ಆರ್‌ಸಿಬಿ ನಾಯಕನ ಸ್ಥಾನ ತುಂಬಬಲ್ಲ ಯಾವುದೇ ಆಟಗಾರನ ಟಾರ್ಗೆಟ್ ಮಾಡದಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.