- ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ದಿನಾಂಕ: 29-09-2024 ರಂದು ನಿಗದಿಯಾಗಿದ್ದ ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಆಗಸ್ಟ್-ಸೆಪ್ಟೆಂಬರ್-2024 (NEP) ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ/ ಪ್ರಾಚಾರ್ಯರಿಗೆ, ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರಿಗೆ ಹಾಗೂ ಬಿ.ಎ. (NEP) 4 ಹಾಗೂ 6ನೇ ಸೆಮೆಸ್ಟರ್‌ನ ವಿದ್ಯಾರ್ಥಿಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ: 29-09-2024 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ. ಸದರಿ ದಿನದಂದು ನಿಗದಿಯಾಗಿರುವ ಪದವಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಸದರಿ ದಿನದಂದು ನಿಗದಿಯಾಗಿದ್ದ ಈ ಕೆಳಕಾಣಿಸಿದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಕೋರ್ಸ್ :
ಬಿಎ ತರಗತಿಯ
ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂಶೋಧನೆ- ವಿಮರ್ಶೆ ಪರೀಕ್ಷೆಗಳನ್ನು ಮುಂದೂಡಲಾಗಿದೆಸದರಿ ವಿಷಯಗಳಿಗೆ ನಡೆಸಲಾಗುವ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕುಲಸಚಿವರು (ಮೌಲ್ಯಮಾಪನ) ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.