ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ. ಸಿಬ್ಬಂದಿಯ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಬಿ.ಕಾಂ ಪದವಿಯ 5ನೇ ಸೆಮಿಸ್ಟರ್‌ನ ಫೈನಾನ್ಶಿಯಲ್ ಮ್ಯಾನೇಜ್‌ಮೆಂಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಾಂಕವನ್ನು ಮುಂದೆ ತಿಳಿಸುವುದಾಗಿ ವಿವಿಯ ಮೌಲ್ಯಮಾಪನ ಕುಲ ಸಚಿವರು ತಿಳಿಸಿದ್ದಾರೆ.