ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದೆ. ಭಾರತೀಯ ಹವಾಮಾನ ಇಲಾಖೆ ಜುಲೈ 15 ಮತ್ತು 16 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಎರಡು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಭಾರಿ ಮಳೆಯಾಗಿದ್ದು ಇಲ್ಲಿಯೂ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.