ಬೆಂಗಳೂರು : ಕೆಲ ದಿನಗಳಿಂದ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟಿಸುವ ಸಾಧ್ಯತೆ ಗೋಚರವಾಗಿದೆ. ಕೆಲವೆಡೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.
ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಜೂನ್ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೀದರ್, ಧಾರವಾಡ, ಹಾವೇರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.