ಉಡುಪಿ : ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿಯವರು ಆದೇಶಿಸಿದ್ದಾರೆ

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ (ಜಲ್ಲಿ ಮತ್ತು ಸರಕು ಮತ್ತು ಸಾಗಾಣಿ ತುಂಬಿದ) ವಾಹನಗಳನ್ನು ನಿಷೇಧಿಸಿ ಆದೇಶಿಸಲಾಗಿದೆ.

ಮೂರುವರೆ ತಿಂಗಳ ನಿಷೇಧದ ನಡುವೆ ಲಘು ವಾಹನಗಳಿಗೆ ಮಾತ್ರ ಆಗುಂಬೆಯಲ್ಲಿ ಅನುವು ಮಾಡಿಕೊಡಲಾಗಿದೆ. ಬಾರಿ ವಾಹನಕ್ಕೆ ಉಡುಪಿ- ಕುಂದಾಪುರ- ಸಿದ್ದಾಪುರ- ಮಾಸ್ತಿಕಟ್ಟೆ -ತೀರ್ಥಹಳ್ಳಿ ಮೂಲಕ ಸಂಚರಿಸಲು ಸೂಚಿಸಲಾಗಿದೆ.