Join The Telegram | Join The WhatsApp |
ಬೆಂಗಳೂರು-
ಚಿತ್ರದುರ್ಗದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ಅವರನ್ನು ಮಠದ ಆಡಳಿತಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಟ್ರಸ್ಟಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿರುವುದರಿಂದ ಟ್ರಸ್ಟಿನ ಸ್ವತ್ತನ್ನು ರಕ್ಷಿಸುವ ದೃಷ್ಟಿಯಿಂದ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಭಾರತ ಸಂವಿಧಾನದ ಅನುಚ್ಛೇದ 162 ರನ್ವಯ ಸರ್ಕಾರವು ಸದರಿ ಸಂಸ್ಥೆಗೆ ಆಡಳಿತಾಧಿಕಾರಿಯನ್ನು ನೇಮಿಸಬಹುದು ಎಂಬುದನ್ನು ಆದೇಶದಲ್ಲಿ ಉಲ್ಲೇಖಿಸಿದೆ.
Join The Telegram | Join The WhatsApp |