ಬೆಂಗಳೂರು : ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪಲೋಕಾಯುಕ್ತರನ್ನಾಗಿ ರಾಜ್ಯಪಾಲರು ಶುಕ್ರವಾರ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನವರಾದ ನ್ಯಾ.ವೀರಪ್ಪ ಅವರು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ ರಾಜ್ಯದಲ್ಲಿ ಎರಡು ಉಪಲೋಕಾಯುಕ್ತ ಹುದ್ದೆಗಳಿವೆ. ಆ ಪೈಕಿ ಎರಡನೇ ಉಪ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.
ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ, ವಿಧಾನಸಭೆ ಸ್ಪೀಕರ್‌, ವಿಧಾನ ಪರಿಷತ್‌ ಸಭಾಪತಿ ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ವೀರಪ್ಪ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.