ಬೆಳಗಾವಿ :
ಕೆ ಎಲ್ ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪುರುಷರ ಟೇಬಲ್ ಟೆನ್ನಿಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಬೆಳಗಾವಿ ಚನ್ನಮ್ಮ ವಿಶ್ವವಿದ್ಯಾಲಯ ಅಂತರ್ ಕಾಲೇಜು ಪಂದ್ಯಾವಳಿಯ ಆಯ್ಕೆ ಬನಹಟ್ಟಿಯಲ್ಲಿ 24 ಮತ್ತು 25 ನವೆಂಬರ್ 2023 ರಂದು ನಡೆಯಿತು .ಪ್ರತೀಕ್ ಪ್ರಭು ಶಿವನಾಯ್ಕರ್ ಅವರು ಅಂತರ್ ವಿಶ್ವವಿದ್ಯಾಲಯಕ್ಕೆ ಆಯ್ಕೆಯಾದರು. ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮತ್ತು ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿಯವರು ಸಾಧಕರನ್ನು ಅಭಿನಂದಿಸಿದ್ದಾರೆ.