ಬೆಳಗಾವಿ :
ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮತ್ತೆ ಬಿಜೆಪಿ ಸೇರುತ್ತಾರ ಎಂಬ ಚರ್ಚೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಲಕ್ಷ್ಮಣ ಸವದಿ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಬಹುದು ಎಂಬ ಚರ್ಚೆ ಜೋರಾಗಿದೆ. ಅವರೊಂದಿಗೆ ಅವರ ಸ್ನೇಹಿತ ಕಾಗವಾಡ ಕಾಂಗ್ರೆಸ್ ಶಾಸಕ ರಾಜುಕಾಗೆ ಅವರ ಹೆಸರು ಸಹ ಬಿಜೆಪಿ ಸೇರ್ಪಡೆಯಾಗುವತ್ತ ಹರಿದಾಡುತ್ತಿದೆ.