Join The Telegram | Join The WhatsApp |
ಬೆಂಗಳೂರು-
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ್ದ ಸ್ಯಾಂಟ್ರೋ ರವಿಯನ್ನು ಕೊನೆಗೂ ಬಂಧಿಸಲಾಗಿದೆ. ಮೈಸೂರಿನಲ್ಲಿ ಕೇಸ್ ಮೇಲೆ ಕೇಸ್ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ರಾಜ್ಯದಿಂದಲೇ ಎಸ್ಕೇಪ್ ಆಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕಿಸಲಾಗಿತ್ತು. ಆದರೆ ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ ಅಂತ ಪೊಲೀಸ್ ಮೂಲಗಳು ತಿಳಿಸಿವೆ.
ಶುಕ್ರವಾರ ಸ್ಯಾಂಟ್ರೊ ರವಿಯನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.
ಮೈಸೂರು, ರಾಮನಗರ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿಕೊಂಡು ಸ್ಯಾಂಟ್ರೊ ರವಿಗಾಗಿ ಹುಡುಕಾಟ ನಡೆಸಿದ್ದರು.
ನಾಲ್ವರು ಎಸ್ಪಿಗಳ ನೇತೃತ್ವದಲ್ಲಿ ಸ್ಯಾಂಟ್ರೊ ರವಿ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಗುಜರಾತ್‌ನಲ್ಲಿ ರವಿ ಬಂಧಿಸಿರುವ ಪೊಲೀಸರು ಕರ್ನಾಟಕಕ್ಕೆ ಕರೆತರುತ್ತಿದ್ದಾರೆ.
ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ವಿರುದ್ಧ ದೂರು ದಾಖಲಾದ ಬಳಿಕ ಆತ ಪರಾರಿಯಾಗಿದ್ದ. ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ನಿರೀಕ್ಷಣಾ ಜಾಮೀನಿಗೂ ಸಹ ಸ್ಯಾಂಟ್ರೊ ರವಿ ಅರ್ಜಿ ಹಾಕಿದ್ದ. ಗುರುವಾರ ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸ್ಯಾಂಟ್ರೊ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನವರಿ 17ಕ್ಕೆ ಮುಂದೂಡಿತ್ತು.
Join The Telegram | Join The WhatsApp |