ಬೆಂಗಳೂರು :
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಬಿಜೆಪಿ ಅಧ್ಯಕ್ಷರಾಗಿ ಸತೀಶ ಕುಂಪಲ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಸತೀಶ ಕುಂಪಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸ್ಪೀಕರ್ ಯು.ಟಿ. ಖಾದರ್ ಎದುರು ಸ್ಪರ್ಧಿಸಿ ಸೋತಿದ್ದರು. ಇದೀಗ ಅವರಿಗೆ ಮಹತ್ವದ ಸ್ಥಾನ ಲಭಿಸಿದೆ.
ಆರ್ ಎಸ್ ಎಸ್ ನಾಯಕರ ಒಲವು ಮತ್ತು ಪಕ್ಷದಲ್ಲಿ ಸುದೀರ್ಘಕಾಲದಿಂದಲೂ ಅವರು ಹೊಂದಿರುವ ನಿಷ್ಠೆಯನ್ನು ಪರಿಗಣಿಸಿ ಅವರ ಹೆಸರನ್ನು ಇದೀಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುದ್ದೆಗೆ ಪರಿಗಣಿಸಲಾಗಿದೆ.
ಜೊತೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಬಲವಾಗಿರುವ ಬಿಲ್ಲವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಈ ನಾಯಕನಿಗೆ ಪಟ್ಟ ಕಟ್ಟಲಾಗಿದೆ.

ಅನುಭವಿ ಕುಂಪಲ: ಸತೀಶ ಕುಂಪಲ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ಆಡಳಿತ ಅನುಭವಿ. ಮೂರು ಬಾರಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆಗಿದ್ದರು. ಎರಡು ಬಾರಿ ಗ್ರಾಮ ಪಂಚಾಯ್ತಿ ಸದಸ್ಯರಾಗಿ, ಉಳ್ಳಾಲ ಮಂಡಲದ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು.