ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2024ರ ಮಾ.31ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ₹79.09 ಕೋಟಿ ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭಕ್ಕಿಂತ (₹61.29 ಕೋಟಿ) ಶೇ. 29.04 ಏರಿಕೆಯಾಗಿದೆ. ಎಸ್‌ಸಿಡಿ ಸಿಸಿ ಬ್ಯಾಂಕ್‌ನ ಇತಿಹಾಸದಲ್ಲೇ ಇದು ಸಾರ್ವಕಾಲಿಕ ದಾಖಲೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ವರದಿ ವರ್ಷದಲ್ಲಿ ₹15540.80 ಕೋಟಿ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ (13514.51 ) .14.99 ಏರಿಕೆ ಆಗಿದೆ. 2024-25ನೇ ಸಾಲಿಗೆ ₹18,000 ಕೋಟಿ ವ್ಯವಹಾರದ ಗುರಿ ಯನ್ನು ಬ್ಯಾಂಕ್ ಹೊಂದಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಠೇವಣಾತಿ ಇಲ್ಲದೆಯೂ ಎಸ್‌ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂ ತರ ಒಟ್ಟು ₹7221.37 ಕೋಟಿ ಠೇವಣಿ ಸಂಗ್ರಹಿಸಿ ಸಾಧನೆ ಮಾಡಿದೆ