ಹೈದರಾಬಾದ್‌: ತೆಲಂಗಾಣ ರಾಜ್ಯದಲ್ಲಿ ದಿನೇದಿನೇ ಬಿಸಿಲಿನ ಬೇಗೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.15 ರಿಂದ ದಿನಕ್ಕೆ ಅರ್ಧ ದಿನ ಮಾತ್ರವೇ ಶಾಲೆಗಳನ್ನು ತೆರೆಯುವಂತೆ ತೆಲಂಗಾಣ ಸರ್ಕಾರ ಆದೇಶಿಸಿದೆ. ಮಾ.15ರಿಂದ ಏ. 23ರ ವರೆಗೂ ಅಂದರೆ ಈ ವರ್ಷದ ಶೈಕ್ಷಣಿಕ ಅವಧಿ ಮುಗಿಯುವವರೆಗೂ ಈ ಆದೇಶ ಜಾರಿಯಲ್ಲಿ ಇರಲಿದೆ. ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.30 ರವರೆಗೆ ಮಾತ್ರ ಶಾಲೆಯನ್ನು ತೆರೆಯಲಿದ್ದು, ಮಧ್ಯಾಹ್ನದ ಭೋಜನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಮಂಡಳಿ ತಿಳಿಸಿದೆ.